ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು:ಕಡಬ ತಾಲೂಕು ಪಂಚಾಯಿತಿ ಗೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ.ಜಯಣ್ಣ ಅವರು ವಾಸ್ತವ್ಯ ಇದ್ದ ಕಡಬದ ಪಂಜ ರಸ್ತೆಯಲ್ಲಿರುವ ವಿದ್ಯಾನಗರದ ಬಾಡಿಗೆ ಮನೆಗೆ ಮುಂಜಾನೆ ಆಗಮಿಸಿದ ಲೋಕಾಯುಕ್ತ ಪೊಲೀಸರು ಜಯಣ್ಣ ಅವರನ್ನು ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.























































































































































































































































































































































































































































































































































































































































































































































































































































































































































































































































































































































































































































































































































































































































































