ಶಿಕ್ಷಕ ಸಂತೋಷ್ ಖಾರ್ವಿಗೆ ಬೀಳ್ಕೊಡುಗೆ
ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ ಸುದೀರ್ಘ ಹತ್ತು ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬೇರೆ ಶಾಲೆಗೆ ವರ್ಗಾವಣೆಗೊಂಡಿರುವ ಶಿಕ್ಷಕ ಸಂತೋಷ್.ಎನ್ ಖಾರ್ವಿ ಅವರನ್ನು ಶಾಲೆಯ ಎಸ್.ಡಿ.ಎಂ.ಸಿ ಮತ್ತು ಶಿಕ್ಷಕವೃಂದವರಿಂದ ಹೊಸಾಡು ಶಾಲೆಯಲ್ಲಿ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷ ಹುಸೇನಪ್ಪ,ನಿವೃತ್ತ ಶಿಕ್ಷಕರಾದ ಸದಾಶಿವ ಶೆಟ್ಟಿ ಮತ್ತು ತೇಜಪ್ಪ ಶೆಟ್ಟಿ,ಅಧ್ಯಾಪಕಿ ನಿರ್ಮಲ ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕ ರಾಜೇಶ್ ಪಡುಕೋಣೆ ಸ್ವಾಗತಿಸಿದರು.ಸಹ ಶಿಕ್ಷಕರಾದ ಪ್ರತಿಮಾ ಜಿ ನಿರೂಪಿಸಿದರು.ನಾಗರತ್ನಾ,ಗಂಗಾ,ರೋಹಿಣಿ ಸಹಕರಿಸಿದರು.ಲೀಲಾ ವಂದಿಸಿದರು.